ಬಜಗೋಳಿ:ರವೀಂದ್ರ ಶೆಟ್ಟಿವರಿಗೆ ಹುಟ್ಟೂರ ಅಭಿನಂದನೆ-Times of karkala

 

ಫೆಡರೇಷನ್ ಆಫ್ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಷಿಯೇಷನ್ ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರ ಶೆಟ್ಟಿ ಬಜಗೋಳಿಯವರಿಗೆ ಹುಟ್ಟೂರ ಅಭಿನಂದನೆ ಕಾರ್ಯಕ್ರಮ ಬಜಗೋಳಿ ಗಣಪತಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ರವೀಂದ್ರ ಶೆಟ್ಟಿಯವರ ಸ್ನೇಹ ಹಾಗೂ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಬಗ್ಗೆ ಶ್ಲಾಘಿಸಿದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಬಜಗೋಳಿ ವಲಯ ಬಂಟರ ಸಂಘದ ಅಧ್ಯಕ್ಷ ಶ್ಯಾಮ ಎನ್. ಶೆಟ್ಟಿ,ಉದ್ಯಮಿಗಳಾದ ಹರೀಶ್ ಡಿ .ಸಾಲ್ಯಾನ್,ಉದಯ್ ಸಾಲ್ಯಾನ್, ಉಮೇಶ್ ರಾವ್,ಮಹಾವೀರ್ ಜೈನ್, ಡಾ.ವೆಂಕಟಗಿರಿ ರಾವ್ ಮುಡಾರು ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ,ನಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕವಿತಾ  ಮತ್ತಿತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.  

 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget