ಬಜಗೋಳಿ:ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಕೆ. ನಿಧನ-Times of karkala


ಬಜಗೋಳಿ: ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಕೆ.(55) ಇಂದು ಬೆಳಿಗ್ಗೆ  ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 

ವಿಶೇಷ ಸಂದರ್ಶನ 

ಕಳೆದ ಕೆಲ ಸಮಯಗಳಿಂದ  ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಚಿಕಿತ್ಸೆ ಪಡೆಯುತ್ತಿದ್ದರು.ಇವರು ಪತ್ನಿ ಹಾಗೂ ಓರ್ವ ಮಗಳನ್ನು ಅಗಲಿದ್ದಾರೆ.

ಪರಿಚಯ:ಬಜಗೋಳಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್‌ ಕೆರ್ವಾಶೆ ಕಳೆದ 30 ವರ್ಷಗಳಿಂದ ಆ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾರ್ಕಳ ತಾಲೂಕಿನ ಕೆರ್ವಾಶೆಯವರಾಗಿರುವ ಅವರು ಶಾಲೆಯ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಉಮೇಶ್‌ ಅವರ ಶ್ರದ್ಧೆ, ಸರಳತೆ, ಕಾರ್ಯಶೈಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದು, ಶಾಲೆಗೆ ಗೈರಾಗುವ ವಿದ್ಯಾರ್ಥಿಗಳ ಮನವೊಲಿಸಿ ಶಾಲೆಗೆ ಹಾಜರಾಗುವಂತೆ ಮಾಡಿರು ತ್ತಾರೆ.

ಸಾರ್ವಜನಿಕರಿಗೆ ಯೋಗ ತರಬೇತಿ, ಮಕ್ಕಳಿಗೆ ನಾಯಕತ್ವ ಶಿಬಿರ ನಡೆಸಿರುತ್ತಾರೆ. ಶಾಲಾ ಕಬಡ್ಡಿ ತಂಡ ಜಿಲ್ಲಾ ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದ ಅವರು 2002-03ರಲ್ಲಿ ಜನಮೆಚ್ಚಿದ ಶಿಕ್ಷಕ ಪ್ರಶಸ್ತಿ, ಸೇವಾದಳ ಜಿಲ್ಲಾ ಶಿಕ್ಷಕ ಪ್ರಶಸ್ತಿ, ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಯಿಂದ ಪುರಸ್ಕೃತರಾಗಿರುತ್ತಾರೆ.

ಸುವರ್ಣ ಮಹೋತ್ಸವ ಮತ್ತು ವಜ್ರಮಹೋತ್ಸವದ ಸಂದರ್ಭದಲ್ಲಿ ಹಳೆವಿದ್ಯಾರ್ಥಿಗಳಿಂದ ದೇಣಿಗೆ, ಕ್ರೀಡಾ ಸಾಮಗ್ರಿ, ಲ್ಯಾಪ್‌ಟಾಪ್‌ ಸಂಗ್ರಹಿಸಿರುತ್ತಾರೆ.ಶಾಲೆಯ ಒಳಾಂಗಣ ಕ್ರೀಡಾಂಗಣ ನಿರ್ಮಾಣದಲ್ಲೂ ಉಮೇಶ್‌ ಕೆ. ಸಹಕರಿಸಿದ್ದಾರೆ.

 


Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget