ಕಾರ್ಕಳ:ಮನೆಗೆ ಸಿಡಿಲು ಬಡಿದು ಓರ್ವ ಸಾವು-Times of karkala


ಕಾರ್ಕಳ:ಮನೆಗೆ ಸಿಡಿಲು ಬಡಿದು ಓರ್ವ ಸಾವು 

ಕಾರ್ಕಳ: ಬೈಲೂರು ಸಮೀಪದ ನೀರೆ ಎಂಬಲ್ಲಿ ಸೋಮವಾರ ಸಂಜೆ 4 ಗಂಟಗೆಯ ವೇಳೆಗೆ ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ ವ್ಯಕ್ತಿ ದಾರುಣ ರೀತಿಯಲ್ಲಿ ಮೃತ ಪಟ್ಟಿದ್ದಾರೆ. ನೀರೆ ರಾಜೀವ ನಗರದ ವಾದಿರಾಜ ಆಚಾರ್ಯ(60) ಮೃತಪಟ್ಟವರು.

ಇದೇ ಸಂದರ್ಭದಲ್ಲಿ ಇವರು ವಾಸವಾಗಿದ್ದ ಮನೆಯ ವಿದ್ಯುತ್ ಪರಿಕರಗಳು ಸುಟ್ಟು ಕರಗಲಾಗಿದೆ. ಮನೆಗೂ ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಈ ಮನೆಯ ಪರಿಸರದಲ್ಲಿ ಇರುವ ಹಲವು ಮನೆಗಳಿಗೂ ಹಾನಿ ಸಂಭವಿಸಿದೆ. ಸಿಡಿಲಿನ ಅಘಾತದಿಂದ ನೆಲದಲ್ಲಿ ಬಿದ್ದು ವಾದಿರಾಜ ಆಚಾರ್ಯ ಅವರನ್ನು ಬೈಲೂರಿನ ಆಸ್ಪತ್ರೆಯೊಂದಲ್ಲಿ ಚಿಕಿತ್ಸೆ ನೀಡಲು ಮುಂದಾಗಿದ್ದಾಗ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ವ್ಯದ್ಯ ಮೂಲ ಧೃಡಪಟ್ಟಿದೆ.

ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಶವ ಮಹಜರು ನಡೆಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ. ಘಟನಾ ಸ್ಥಳಕ್ಕೆ ಕಾರ್ಕಳ ಪ್ರೆಭಾರ ತಹಶೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಶಿವಪ್ರಸಾದ್ ಭಟ್ ಇನ್ನಿತರರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget