ಹೆಬ್ರಿ:ಹೊಳೆಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು-Times of karkala

 





ಹೆಬ್ರಿ:ತಾಲೂಕಿನ ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳು ಗುಡ್ಡೆ ಸಮೀಪದ ಭಟ್ರಾಡಿಯ ಹೊಳೆಯಲ್ಲಿ ಈಜಲು ಹೋದ ಹಿರಿಯಡ್ಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನ.26 ರ ಶುಕ್ರವಾರ ನಡೆದಿದೆ.

ಮೃತರನ್ನು ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (16) ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ ಮೃತದೇಹವನ್ನು ಮೇಲೆ ಎತ್ತಲಾಗಿದೆ.

ಸ್ಥಳಕ್ಕೆ ಹೆಬ್ರಿ ತಹಸೀಲ್ದಾರ್ ಪುರಂದರ, ಕಂದಾಯ ನಿರೀಕ್ಷಕ ಹಿತೇಶ್, ಪಿಎಸ್ಐ ಮಹೇಶ್, ಮುಖಂಡರಾದ ಸುರೇಶ್ ಶೆಟ್ಟಿ ಶಿವಪುರ, ರಮೇಶ್ ಪೂಜಾರಿ ಪರಿಶೀಲನೆ ನಡೆಸಿದರು.

























Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget