ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:ಕುವೆಂಪು ಅವರ 118ನೇ ಜನ್ಮದಿನಾಚರಣೆ-Times Of Karkala

 ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:ಕುವೆಂಪು ಅವರ  118ನೇ ಜನ್ಮದಿನಾಚರಣೆ-Times Of Karkala

ನೆಹರು ಯುವ ಕೇಂದ್ರ ಉಡುಪಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.) & ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆ ಹಾಗೂ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ನ ರಂಗಮಂದಿರದಲ್ಲಿ ಜರಗಿತು.

ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವಾಧ್ಯಕ್ಷರಾದ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಅವರು ಕುವೆಂಪು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ, ಪುಷ್ಪರ್ಚನೆ ಸಲ್ಲಿಸಿ ಮಾತನಾಡಿ ಕುವೆಂಪು ಅವರು ಯಾವುದೇ ಜಾತಿಗೆ ಸೇರಿದವರಲ್ಲದವರು. ವೈಚಾರಿಕ ಪ್ರಜ್ಞೆಯೊಂದಿಗೆ ಪರಿಪೂರ್ಣವಾಗಿ ಅರಳಿದ ಬದುಕು ಅವರದಾಗಿತ್ತು. ಅನುಭವದ ಆಳಕ್ಕೆ ಇಳಿದು ಕವಿಯಾಗಿ ಜಗತ್ತಿಗೆ ವಿಚಾರಧಾರೆಗಳನ್ನು ಹಂಚುವ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶಗಳನ್ನು ನೀಡಿ ಮನುಕುಲದಲ್ಲಿ ಅಜರಾಮರಾಗಿ ಉಳಿದದರು. ವಿಶ್ವಮಾನವನಾಗಿ ಎಲ್ಲರ ಮನೆ ಮನದಲ್ಲಿ ಉಳಿದುಕೊಂಡಿರುವ ಇಂತಹ ಮಹಾನ್ ಸಂತನನ್ನು ನೆನೆಯುವುದೇ ನಮ್ಮೆಲ್ಲರ ಭಾಗ್ಯ ಎಂದು ಸ್ಮರಿಸಿದರು.ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ,  ಪೂರ್ವಾಧ್ಯಕ್ಷರಾದ ಸತೀಶ್ ಪೂಜಾರಿ ಅಬ್ಬನಡ್ಕ, ಉದಯ ಅಂಚನ್ ಬೋಳ, ಉಪಾಧ್ಯಕ್ಷ ಸುರೇಶ್ ಅಬ್ಬನಡ್ಕ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್,  ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget