ನಂದಳಿಕೆ ಅಬ್ಬನಡ್ಕ ಪ್ರೆಂಡ್ಸ್ ಕ್ಲಬ್: ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆ ಹಾಗೂ ವಿಶ್ವ ಯುವ ದಿನಾಚರಣೆ-Times Of Karkala

ನಂದಳಿಕೆ ಅಬ್ಬನಡ್ಕ ಪ್ರೆಂಡ್ಸ್ ಕ್ಲಬ್: ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆ ಹಾಗೂ ವಿಶ್ವ ಯುವ ದಿನಾಚರಣೆ-Times Of Karkalaಕಾರ್ಕಳ:ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಇದರ ಆಶ್ರಯದಲ್ಲಿ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ಬಿನ ರಂಗಮಂದಿರದಲ್ಲಿ ಬುಧವಾರ ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆ ಹಾಗೂ ವಿಶ್ವ ಯುವ ದಿನಾಚರಣೆ ಕಾರ್ಯಕ್ರಮ ಜರಗಿತು.

ಸ್ವಾಮಿ ವಿವೇಕಾನಂದರು ನನಗೆ ಒಂದು ಸಹಸ್ರ ಉಕ್ಕಿನ ನರಗಳುಳ್ಳ ದೇಶಕ್ಕಾಗಿ ಜೀವಿಸುವ ಶ್ರದ್ಧೆಯುಳ್ಳ, ಕನಸುಗಳೆಲ್ಲ ಯುವಕರನ್ನು ನನಗೆ ಕೊಡಿ ನಾನು ದೇಶದ ಚಿತ್ರಣವನ್ನೇ ಬದಲಿಸಬಲ್ಲೆ ಎಂಬ ಮಾತನ್ನು ವಿವೇಕಾನಂದರು ಹೇಳಿದ್ದರು ಎಂದು ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಯುವಕರೆಲ್ಲರೂ ಮೈಗೂಡಿಸಿಕೊಂಡಾಗ ಸ್ವಾಮಿ ವಿವೇಕಾನಂದರ ಕನಸಿನ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು.

ಈ ಸಂದರ್ಭದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ ಪೂರ್ವಾಧ್ಯಕ್ಷರಾದ ಆನಂದ ಪೂಜಾರಿ, ರಾಜೇಶ್ ಕೋಟ್ಯಾನ್, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ವನದುರ್ಗಾ ಸ್ವಸಹಾಯ ಸಂಘದ ಅಧ್ಯಕ್ಷೆ ಲಲಿತಾ ಆಚಾರ್ಯ, ಸದಸ್ಯರಾದ ಕೀರ್ತನ್ ಕುಮಾರ್, ಪ್ರಶಾಂತ್ ಕುಮಾರ್ ಮೊದಲಾದವರಿದ್ದರು.

ಜಾಹೀರಾತು 
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget