ಹೆಬ್ರಿಯಲ್ಲಿ ಸಚಿವ ಸುನಿಲ್ ಕುಮಾರ್ ರವರಿಂದ ಅಹವಾಲು ಸ್ವೀಕಾರ-Times Of Karkala

ಹೆಬ್ರಿಯಲ್ಲಿ ಸಚಿವ ಸುನಿಲ್ ಕುಮಾರ್ ರವರಿಂದ   ಅಹವಾಲು ಸ್ವೀಕಾರ-Times Of  Karkala

ಹೆಬ್ರಿ : ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೆಬ್ರಿಗೆ ಆಗಮಿಸಿ ಹೆಬ್ರಿ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಹೆಬ್ರಿಯ ತಾಲ್ಲೂಕು ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಅನುದಾನ‌ ನೀಡುವಂತೆ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಕುಮಾರ್ ಶಿವಪುರ ಮನವಿ ಮಾಡಿದರು. ಚಾರ ಗ್ರಾಮದಲ್ಲಿ ಏತ ನೀರಾವರಿ ಯೋಜನೆಯನ್ನು ಕಾರ್ಯಗತಗೊಳಿಸುವಂತೆ ಸಿ.ಎಂ.ಪ್ರಸನ್ನ ಕುಮಾರ್‌ ಶೆಟ್ಟಿ ಮನವಿ ಮಾಡಿದರು. ಜನತೆಗೆ ಹಕ್ಕುಪತ್ರ ನೀಡುವಂತೆ ನಾಡ್ಪಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಹೆಗ್ಡೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಹೆಬ್ರಿ ತಹಶೀಲ್ಧಾರ್ ಪುರಂದರ್,  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್, ಕಂದಾಯ ನಿರೀಕ್ಷಕ ಹಿತೇಶ್, ಬಿಜೆಪಿ ಮುಖಂಡರಾದ ಹೆಬ್ರಿ ಗುರುದಾಸ ಶೆಣೈ, ಮುನಿಯಾಲು ದಿನೇಶ್ ಪೈ, ಜ್ಯೋತಿ ಹರೀಶ್ ಪೂಜಾರಿ, ಶಿವಪುರ ಸುರೇಶ್ ಶೆಟ್ಟಿ, ಸುಧಾಕರ ಹೆಗ್ಡೆ, ಪಂಚಾಯಿತಿ ಅಧ್ಯಕ್ಷೆ ಮಾಲತಿ, ಉಪಾಧ್ಯಕ್ಷ ಗಣೇಶ ಕುಮಾರ್‌, ಪಕ್ಷದ ವಿವಿಧ ಮುಖಂಡರು, ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜಾಹೀರಾತು































.......





Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget