ಮಂಗಳೂರು:ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೋಲೀಸರ ಅಮಾನತು-Times Of Karkala

ಮಂಗಳೂರು:ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್  ಸೇರಿದಂತೆ ಆರು ಮಂದಿ ಪೋಲೀಸರ ಅಮಾನತು-Times Of Karkala 

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕರ್ತವ್ಯ ಲೋಪ ಎಸಗಿದ ಮಹಿಳಾ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಸೇರಿದಂತೆ ನಗರದ ಆರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ .

ಸಾಮಾಜಿಕ ಜಾಲತಾಣಗಳಲ್ಲಿ ಬುಧವಾರ ವಿಡಿಯೋ ವೈರಲ್ ಆಗುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಕುರಿತು ನಗರ ಪೊಲೀಸ್ ಆಯುಕ್ತರು ಪ್ರತಿಕ್ರಿಯಿಸಿ ಮಾಹಿತಿ ನೀಡಿದ್ದಾರೆ. 

ಅಪ್ರಾಪ್ತ ಬಾಲಕಿಗೆ  ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ ತೋರಿದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ರೋಸಮ್ಮ ಅವರನ್ನು ಅಮಾನತುಗೊಳಿಸಲಾಗಿದೆ.ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಈ ಪ್ರಕರಣದ ಆರೋಪಿಯಾಗಿದ್ದು ನಂತರ ಆತನನ್ನು ಬಂಧಿಸಲಾಯಿತು. 


ಮತ್ತೊಂದು ಘಟನೆಯಲ್ಲಿ ಠಾಣೆಯಲ್ಲಿಯೇ ಮದ್ಯ ಸೇವಿಸಿದ ಇಬ್ಬರು ಎಎಸ್ಐಗಳು ಇಬ್ಬರು ಹೆಡ್  ಕಾನ್ ಸ್ಟೇಬಲ್ ಮತ್ತು ಒಬ್ಬ ಕಾನ್ ಸ್ಟೇಬಲ್ ಅವರನ್ನು ಅಮಾನತುಗೋಳಿಸಲಾಯಿತು. ಈ ಪ್ರಕರಣದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದರು ಎಂದು ಆಯುಕ್ತರು ತಿಳಿಸಿದ್ದಾರೆ. ಈ ಘಟನೆ ಆಗಸ್ಟ್ 26 , 2021 ರಂದು ಸಂಭವಿಸಿದ್ದು ಪೊಲೀಸ್ ಠಾಣೆಯಲ್ಲಿ ಮದ್ಯ ಸಹಿತವಾದ ಪಾರ್ಟಿ ನಡೆದಿತ್ತು.

ಜಾಹೀರಾತು

































Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget