ಕಾರ್ಕಳ: ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ತ್ರೀಯ ಯುವ ದಿನ ಆಚರಣೆ-Times Of Karkala

 ಕಾರ್ಕಳ: ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ತ್ರೀಯ  ಯುವ ದಿನ ಆಚರಣೆ-Times Of Karkala
ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ರಾಷ್ತ್ರೀಯ ಯುವ ದಿನವನ್ನು ಆಚರಿಸಲಾಯಿತು. ಜೆಸಿಐ ಕುಂದಾಪುರ ವಿಭಾಗದ ತರಬೇತುದಾರ ಸದಾನಂದ ನಾವಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು “ಸ್ವಾಮಿ ವಿವೇಕಾನಂದರ ಬದುಕು ಭಾರತದ ಇತಿಹಾಸದಲ್ಲಿ ಮಹತ್ವಪೂರ್ಣ ಅಧ್ಯಾಯ. ಅವರನ್ನುಆದರ್ಶರನ್ನಾಗಿಟ್ಟುಕೊಂಡು ನಾವು ಹೊಸ ಹೊಸ ವಿಚಾರಗಳನ್ನು ಕಲಿಯುವುದರ ಜೊತೆಗೆಇ ತರರಿಗೆ ಸಹಾಯ ಮಾಡುತ್ತಾ ನಮ್ಮಜೀವನದ ಸ್ವಲ್ಪ ಭಾಗವನ್ನಾದರೂ ಸಮಾಜ ಸೇವೆ ಸಮರ್ಪಿಸಿಕೊಳ್ಳಬೇಕು” ಎಂದು ಹೇಳಿದರು. 

ಸಂಸ್ಥೆಯ ಮುಖ್ಯ ಶಿಕ್ಷಕರಾದ ಮೇರಿಯನ್ ಡಿ’ಸೋಜ, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್‌ ಅಂದ್ರಾದೆ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ವೇಷತೊಟ್ಟು ಗಮನ ಸೆಳೆದರು. ವಿದ್ಯಾರ್ಥಿಗಳಾದ ಸುಧೀಕ್ಷಾ ಸ್ವಾಗತಿಸಿ ಸ್ಲೀಟಾ ಕಾರ್ಯಕ್ರಮ ನಿರೂಪಿಸಿದರು, ಅನುಷ್ಕಾ ವಂದಿಸಿದರು.

ಜಾಹೀರಾತು 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget