ಕ್ರೈಸ್ಟ್ ಕಿಂಗ್:ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ-Times Of Karkala

ಕ್ರೈಸ್ಟ್ ಕಿಂಗ್:ಮಕ್ಕಳ ಲಸಿಕಾ ಅಭಿಯಾನಕ್ಕೆ ಚಾಲನೆ-Times Of Karkala 

ಕಾರ್ಕಳ: ಇಲ್ಲಿನ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ  15 ರಿಂದ 18 ವರ್ಷದವರೆಗಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಕಾರ್ಕಳ ತಾಲೂಕು ವೈದ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಅವರು ದೀಪ ಬೆಳಗಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಎಲ್ಲಾ ಮಕ್ಕಳು ಯಾವುದೇ ಅಂಜಿಕೆ ಅಳುಕಿಲ್ಲದೆ ಲಸಿಕೆ ತೆಗೆದುಕೊಳ್ಳಬೇಕು. ಲಸಿಕೆಗಳು ನಮ್ಮ ಆರೋಗ್ಯದ ಹಿತದೃಷ್ಟಿಯಿಂದ ಇವೆಯೇ ಹೊರತು ಯಾವುದೇ ಅಪಾಯ ಸೃಷ್ಟಿಸುವುದಕ್ಕಲ್ಲ. ಲಸಿಕೆಯ ಕುರಿತು ಇರುವ ಮಿಥ್ಯಾರೋಪಗಳಿಗೆ ತಲೆ ಕೆಡೆಸಿಕೊಳ್ಳಬಾರದು” ಎಂದು ಹೇಳಿದರು. 


ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್.ರಾವ್, ತಾಲೂಕು ಸರಕಾರಿ ಆಸ್ಪತ್ರೆಯ ಸರ್ಜನ್ ಡಾ.ಉದಯಕುಮಾರ್, ವೈದ್ಯೆ ಡಾ. ಮಾನಸ ಶ್ರೀರಾಮ್, ಡಾ. ಸ್ಮಿತಾ ವಾಝ್, ಕ್ರೈಸ್ಟ್ ಕಿಂಗ್  ಪದವಿಪೂರ್ವ ವಿಭಾಗದ ಉಪಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಪ್ರಾಚಾರ್ಯ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಪ್ರಾಚಾರ್ಯ ಮೇರಿಯನ್ ಡಿ’ಸೋಜ ಮುಂತಾದವರು ಉಪಸ್ಥಿತರಿದ್ದರು. ಪದವಿಪೂರ್ವ ಪ್ರಾಚಾರ್ಯ ಲಕ್ಷ್ಮಿ ನಾರಾಯಣ ಕಾಮತ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು






























Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget