ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಗೆ ಸನ್ಮಾನ-Times Of Karkala

ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಗೆ ಸನ್ಮಾನ-Times Of Karkala

ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಉಡುಪಿಯ ಕಿದಿಯೂರು ಹೋಟೆಲ್ ರೂಫ್ ಟಾಪ್  ಸಭಾಂಗಣದಲ್ಲಿ ಜರಗಿದ 22ನೇ ವರ್ಷದ ವಾರ್ಷಿಕ ಸಮಾರಂಭದಲ್ಲಿ ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.) ಸಂಸ್ಥೆಯನ್ನು ಸನ್ಮಾನಿಸಿ ಗೌರವಿಸಿದರು. 

ಸಂಸ್ಥೆಯ ಪರವಾಗಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರು ಸನ್ಮಾನ ಸ್ವೀಕರಿಸಿದರು. 

ಉಡುಪಿ ಜಿಲ್ಲೆ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾದ ನಾಗೇಶ್ ಬಿಲ್ಲವ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಿತು.


ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷರಾದ ನಂದಳಿಕೆ ರಾಜೇಶ್ ಕೋಟ್ಯಾನ್, ಅಬ್ಬನಡ್ಕ ಸತೀಶ್ ಪೂಜಾರಿ, ಕಾರ್ಯದರ್ಶಿ ಸುರೇಶ್ ಕಾಸ್ರಬೈಲು, ಜೊತೆ ಕಾರ್ಯದರ್ಶಿ ಪುಷ್ಪಾ ಕುಲಾಲ್, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಅಬ್ಬನಡ್ಕದ ಶ್ರೀ ವನದುರ್ಗಾ ಸ್ವ ಸಹಾಯ ಸಂಘದ ಅಧ್ಯಕ್ಷರಾದ ಲಲಿತಾ ಆಚಾರ್ಯ, ಸದಸ್ಯರಾದ ಹರೀಶ್ ಪೂಜಾರಿ, ಲೀಲಾ ಪೂಜಾರಿ, ಅಶ್ವಿನಿ ಪ್ರಭಾಕರ್,  ಕಿರಣ್ ಶೆಟ್ಟಿ,  ಸುದರ್ಶನ್ ಸಾಲ್ಯಾನ್, ಪ್ರಶಾಂತ್ ಕುಮಾರ್  ಮೊದಲಾದವರು ಉಪಸ್ಥಿತರಿದ್ದರು

ಜಾಹೀರಾತು

































Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget