ಹಿರಿಯ ಸಾಹಿತಿ, ಕನ್ನಡ ಪರ ಹೋರಾಟಗಾರ ಚಂದ್ರಶೇಖರ್ ಪಾಟೀಲ್ ನಿಧನ-Times Of Karkala

 ಹಿರಿಯ ಸಾಹಿತಿ, ಕನ್ನಡ ಪರ ಹೋರಾಟಗಾರ ಚಂದ್ರಶೇಖರ್ ಪಾಟೀಲ್ ನಿಧನ-Times Of Karkala

ಕವಿ ನಾಟಕಕಾರ, ಕನ್ನಡ ಪರ ಹೋರಾಟಗಾರ ಪ್ರೊ ಚಂದ್ರಶೇಖರ್ ಪಾಟೀಲ್ ಬೆಂಗಳೂರಿನಲ್ಲಿ ನಿಧನರಾದರು.

ಅವರಿಗೆ 82  ವರ್ಷ ವಯಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಚಂಪಾ ಅವರು ನಗರದ ಕೋಣನಕುಂಟೆಯ ಆಸ್ಟ್ರಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮೃತರು ಒಬ್ಬ ಪುತ್ರ, ಒಬ್ಬರು ಪುತ್ರಿ ಸಹಿತ ಅಪಾರ ಬಂದು ಮಿತ್ರರು ಅಭಿಮಾನಿಗಳನ್ನು ಅಗಲಿದ್ದಾರೆ.

ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರಾಗಿದ್ದ ಪ್ರೊ ಚಂದ್ರಶೇಖರ್ ಪಾಟೀಲ್  ಅವರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢ ಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಕಾಲೇಜು ವಿದ್ಯಾರ್ಥಿಯಾಗಿದ್ದಾಗ ವಿ.ಕೃ.ಗೋಕಾಕರ ಮಾರ್ಗದರ್ಶನ ಸಿಕ್ಕಿತ್ತು . ವಿದ್ಯಾರ್ಥಿಯಾಗಿದ್ದಾಗಲೇ ಅವರ ಪ್ರಥಮ ಕವನ ಸಂಕಲನ ' ಬಾನುಲಿ' (1960 )ಪ್ರಕಟವಾಯಿತು. ನವ್ಯ ಮಾರ್ಗದಲ್ಲಿ ಕಾವ್ಯ ಕೃಷಿ ಆರಂಭಿಸಿದ ಅವರು ಕರ್ನಾಟಕದ ವಿಶ್ವವಿದ್ಯಾನಿಲಯದ ಇಂಗ್ಲಿಷ್ ಸ್ನಾತಕೋತ್ತರ (1962 ) ಪಧವೀಧರರು.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತಿಮತ್ತೂರು ಎಂಬ ಗ್ರಾಮದವರಾದ ಚಂಪಾ 1939  ರ ಜೂನ್ 18  ರಂದು ಜನಿಸಿದರು. ತಂದೆ ಬಸವರಾಜ ಹಿರೇಗೌಡ, ತಾಯಿ ಮುರಿಯವ್ವ , ಚಂಪಾ ಹುಟ್ಟು ಹೋರಾಟಗಾರ ಮನೋಭಾವದವರು. ಕನ್ನಡ ನಾಡಿನ ಸಾಹಿತ್ಯಕ , ಸಾಮಾಜಿಕ, ಸಾಂಸ್ಕೃತಿಕ, ಹಾಗೂ ಭಾಷಾ ಚಳುವಳಿಗಳಲ್ಲಿ ಮುಂಚೂಣಿಯಲ್ಲಿ ನಿಂತು ಹೋರಾಟ ನಡೆಸಿದವರು.

ಇದಲ್ಲದೆ ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿ ವೇತನ ಪಡೆದು ಇಂಗ್ಲೆಂಡಿನ ಲೀಡ್ಸ್ ವಿಶ್ವ ವಿದ್ಯಾನಿಲದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಮಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೋಮ ಪಡೆದರು. ಶಿಕ್ಷಣ ಪ್ರತಿ ಹಂತದಲ್ಲಿಯೂ ಅಗ್ರ ಶ್ರೇಯಾಂಕಗಳಿಸಿದ ಕೀರ್ತಿ ಅವರದಾಗಿತ್ತು. 

ಜಾಹೀರಾತು 
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget